ರಾಯಚೂರು: ನಕಲಿ ನೋಟು ಚಲಾವಣೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮುಂದಾಗಿದ್ದ ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳು. ಹೋಟೆಲ್ ನಲ್ಲಿ ಬಿರಿಯಾನಿ ತಿಂದಿದ್ದ ಈ ಇಬ್ಬರು ನಕಲಿ 500 ರೂ. ನೋಟು ಚಲಾವಣೆ ಮಾಡಿದ್ದರು ಎನ್ನಲಾಗಿದೆ.
ರಾಯಚೂರು ನಗರದ ಹೊಟೇಲ್ ನಲ್ಲಿ ಈ ಘಟನೆ ನಡೆದಿದೆ. ಚಿಕನ್ ಬಿರಿಯಾನಿ ತಿಂದು 500 ರೂ. ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲೀಕ ನೋಟು ಪರಿಶೀಲಿಸಿದಾಗ ನಕಲಿ ನೋಟು ಎನ್ನುವುದು ಬಯಲಾಗಿದೆ.
ಮನೋರಂಜನೆಗಾಗಿ ಬಳಸುವ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ನಕಲಿ ನೋಟನ್ನ ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು.
ಬಳಿಕ ಹೋಟೆಲ್ ಮಾಲೀಕ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರು ಆರೋಪಿಗಳನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4