ಬೀದರ್: ತೆಲಂಗಾಣ ರಾಜ್ಯದ ಹೈದ್ರಾಬಾದ್ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ–65ರ ಮುಖಾಂತರ ಮಹಾರಾಷ್ಟ್ರ ರಾಜ್ಯಕ್ಕೆ ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಕೋಟಿಗೂ ಮೌಲ್ಯದ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಗೆಜೆಟೆಡ್ ಅಧಿಕಾರಿ ಡಾ.ಬಾಲಕೃಷ್ಣ ರಾಠೋಡ್ ಅವರ ನೇತೃತ್ವದಲ್ಲಿ ರಾಜೇಶ್ವರ ಓವರ್ ಬ್ರಿಡ್ಜ್ ರಾ.ಹೆದ್ದಾರಿ-65 ಮೇಲೆ ಕಾರು ತಪಾಸಣೆ ನಡೆಸಲಾಗುತ್ತಿತ್ತು. ಇದೇ ವೇಳೆ ಆರೋಪಿಗಳು ಪೊಲೀಸರನ್ನು ನೋಡಿ ಕಾರು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದು, ರಸ್ತೆ ಬದಿಯ ಡಿವೈಡರ್ ಗೆ ಕಾರು ಡಿಕ್ಕಿಯಾಗಿದೆ.
ಈ ವೇಳೆ ಕಾರಿನಿಂದ 2—3 ಗಾಂಜಾ ಪ್ಯಾಕೆಟ್ ಗಳು ಹೊರ ಬಿದ್ದಿದೆ. ಪೊಲೀಸರು ತಪಾಸಣೆ ಮಾಡಿದ ವೇಳೆ ಕಾರಿನಲ್ಲಿ 1,23,90,000 ರೂ. ಮೌಲ್ಯದ ಒಟ್ಟು 123 ಕೆ.ಜಿ. ಗಾಂಜಾ ಪತ್ತೆಯಾಗಿತ್ತು. ತಕ್ಷಣವೇ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೀದರ್ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಯಿತು. ಬೀದರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಚಂದ್ರಕಾಂತ ಪೂಜಾರಿ, ಮುಂದಾಳತ್ವದಲ್ಲಿ ಜೆ.ಎಸ್ ನ್ಯಾಮೇಗೌಡರ, ಪೊಲೀಸ್ ಉಪಾಧೀಕ್ಷಕರು, ಹುಮನಾಬಾದ ಹಾಗೂ ಕೃಷ್ಣಕುಮಾರ ಪಾಟೀಲ್, ಸಿ.ಪಿ.ಐ ಮಂಠಾಳ ರವರ ನಿದರ್ಶನದಂತೆ ಕಾರ್ಯಾಚರಣೆ ನಡೆಸಲಾಯಿತು.
ನಾಗೇಂದ್ರ ಪಿ.ಎಸ್.ಐ (ಕಾ.ಸೂ) ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ರವರು ತಮ್ಮ ಸಿಬ್ಬಂದಿಯವರಾದ ವಿಠಲ, ಬಲವಂತರೆಡ್ಡಿ, ದೇವಿಂದ್ರ, ವಿಶ್ವನಾಥ, ಮಾರುತಿ, ಬಸವರಾಜ, ಬೀದರ್ ಜಿಲ್ಲೆಯ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx