ವಿಜಯಪುರ: ಜಿಲ್ಲೆಯ ಕೊಲ್ಹಾರ ಬಳಿ ದೇವರ ಪಲ್ಲಕ್ಕಿಯೊಂದಿಗೆ ಕೃಷ್ಣಾ ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ. ಕಾರಜೋಳ ಗ್ರಾಮದ ಸುದೀಪ ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಮೃತ ಬಾಲಕರಾಗಿದ್ದಾರೆ.
ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಲ್ಲಕ್ಕಿಯಲ್ಲಿ ದೇವಿಯ ವಿಗ್ರಹವನ್ನು ತೆಗೆದುಕೊಂಡು ಸ್ನಾನ ಮಾಡಿಸಲು ನದಿಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.
ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಿ ವಿಗ್ರಹಗಳಿಗೆ ಸ್ನಾನ ಮಾಡಿಸಲು ನದಿಗೆ ಗ್ರಾಮಸ್ಥರು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಇಬ್ಬರು ಬಾಲಕರ ಮೃತದೇಹ ಹೊರತೆಗೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296