ಮಂಡ್ಯ: ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಮದ್ದೂರಮ್ಮ ದೇವಾಲಯದ ಕೊಳದಲ್ಲಿ ನಡೆದಿದೆ
16 ವರ್ಷದ ಅಜಲಮ್ ಪಾಷಾ, 13 ವರ್ಷದ ಮಹಮ್ಮದ್ ಅಲಿ ಮೃತ ದುರ್ದೈವಿಗಳಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಬಾಲಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


