ಮಂಡ್ಯ: ಕೆರೆಯಲ್ಲಿ ಈಜಾಡಲು ಹೋಗಿದ್ದ ಐವರು ಬಾಲಕರ ಪೈಕಿ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಂಕರಪುರ ಗ್ರಾಮದ ರಂಜನ್ ಗೌಡ (14) ಹಾಗೂ ಮುತ್ತುರಾಜು (17) ಮೃತಪಟ್ಟವರಾಗಿದ್ದಾರೆ. ರಜೆ ಇದ್ದ ಕಾರಣ ಸ್ನೇಹಿತರ ಜೊತೆಗೆ ಆಟವಾಡಲು ಹೋಗಿದ್ದ ಬಾಲಕರು ಕೆರೆಯಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ.
ರಂಜನ್ ಗೌಡ ಮುರಾರ್ಜಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು, ಮುತ್ತುರಾಜು ಸೋಮನಹಳ್ಳಿಯ ಐಟಿಐ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಇವರಿಬ್ಬರಿಗೆ ಕೂಡ ಈಜು ಬರುತ್ತಿರಲಿಲ್ಲ ಎಂದು ತಿಳಿದು ಬಂದಿದೆ.
ಮಕ್ಕಳು ನೀರಿನ ಆಳ ತಿಳಿಯದೇ ನೀರಿಗಿಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ತಕ್ಷಣವೇ ಜೊತೆಗಿದ್ದ ಗೆಳೆಯವರು ಇವರನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಗ್ರಾಮಸ್ಥರು ದೇಶಹಳ್ಳಿ ಕೆರೆ ಬಳಿ ಜಮಾಹಿಸಿ ರಾತ್ರಿ ರಂಜನ್ ಗೌಡ ಮೃತ ದೇಹ ಪತ್ತೆ ಮಾಡಿದ್ದಾರೆ.ಆದರೆ ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಬೆಳಿಗ್ಗೆ 8.30 ಕ್ಕೆ ಮುತ್ತುರಾಜು ದೇಹ ಪತ್ತೆಯಾಗಿದೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296