ಲಂಡನ್: ಭಾರತ ಮೂಲದ ಇಬ್ಬರು ವಿದ್ಯಾರ್ಥಿಗಳು ಟ್ರಕ್ಕಿಂಗ್ ಹೋದ ಸಂದರ್ಭ ಜಲಪಾತವೊಂದರಲ್ಲಿ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸ್ಕಾಟ್ಲೆಂಡ್ ನಲ್ಲಿ ನಡೆದಿದೆ. ಜಿತೇಂದ್ರನಾಥ್ ಜಿತು ಕರುತುರಿ (26) ಮತ್ತು ಚಾನ್ಹಕ್ಯ ಬೋಲಿಸೆಟ್ಟಿ (22) ಮೃತ ವಿದ್ಯಾರ್ಥಿಗಳಾಗಿದ್ದಾರೆ.
ವಿದ್ಯಾರ್ಥಿಗಳು ಸ್ಕಾಟ್ಲೆಂಡ್ ನ ಡುಂಡಿ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು, ಡೇಟಾ ಸೈನ್ಸ್ ಮತ್ತು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆಯುತ್ತಿದ್ದರು. ಈ ವಿದ್ಯಾರ್ಥಿಗಳು ಜಲಪಾತದ ಬಳಿ ಸ್ನೇಹಿತರೊಂದಿಗೆ ಟ್ರಕ್ಕಿಂಗ್ ಹೋಗಿದ್ದರು. ಈ ವೇಳೆ ಸೆಲ್ಫಿ ತೆಗೆಯಲು ಮುಂದಾದಾಗ ಇಬ್ಬರು ವಿದ್ಯಾರ್ಥಿಗಳು ಜಲಪಾತದಲ್ಲಿ ಜಾರಿ ಬಿದ್ದು, ದುರಂತ ಅಂತ್ಯ ಕಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296