ತುಮಕೂರು : ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಭರತ್ (40) ಮತ್ತು ಜಮಾಲುದೀನ್ (38) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 6 ಲಕ್ಷ 70 ಸಾವಿರ ರೂಪಾಯಿ ಮೌಲ್ಯದ 113 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದು, ಈ ಮೂಲಕ ಎರಡು ಪ್ರತ್ಯೇಕ ಸರಗಳ್ಳತನ ಪ್ರಕರಣಗಳನ್ನ ಪತ್ತೆ ಹಚ್ಚಲಾಗಿದೆ.
ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆ ಮತ್ತು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಸರಗಳ್ಳತನ ಪ್ರಕರಣಗಳಲ್ಲಿ ಈ ಬಂಧಿತರು ಭಾಗಿದ್ದಾರೆ.
ಆರೋಪಿಗಳು ಬೈಕ್ ನಲ್ಲಿ ಸಂಚರಿಸುತ್ತಾ ವಾಕಿಂಗ್ ಮಾಡುವ ಒಂಟಿ ಮಹಿಳೆಯರನ್ನ ಗುರಿಯಾಗಿ ಹಿಂಬಾಲಿಸುತ್ತಿದ್ದರು. ಸೂಕ್ತ ಅವಕಾಶ ಕಂಡು ಕೂಡಲೇ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಈ ಖದೀಮರು ತುಮಕೂರಿನ ವಾಲ್ಮೀಕಿ ನಗರದಲ್ಲಿ ವಸಂತಮ್ಮ ಎಂಬ ಮಹಿಳೆಯ ಸುಮಾರು 70 ಗ್ರಾಂ ತೂಕದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದರು.
ಈ ಪ್ರಕರಣ ಸಂಬಂಧ ವಸಂತಮ್ಮ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಕಳ್ಳರಿಂದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4