ಕೊರಟಗೆರೆ: ಹಂಚಿಹಳ್ಳಿ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಎರಡು ಚಿರತೆಗಳು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮದಲ್ಲಿ ಎರಡು ಚಿರತೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದವು. 25 ದಿನದ ಹಿಂದೆ ಇದೇ ಸ್ಥಳದಲ್ಲಿ ಒಂದು ಚಿರತೆ ಬೋನಿಗೆ ಬಿದ್ದಿತ್ತು.
ಇದೀಗ 25 ದಿನಗಳ ಅಂತರದಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಇನ್ನೆರಡು ಚಿರತೆಗಳು ಬಿದ್ದಿವೆ. ಆದ್ರೆ, ಇನ್ನೂ ಕೂಡ ಎರಡು ಚಿರತೆಗಳು ಬೆಟ್ಟದಲ್ಲಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪ್ರತಿದಿನ ಗ್ರಾಮಗಳಿಗೆ ನುಗ್ಗಿ ಚಿರತೆ ಮೂಕ ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇನ್ನುಳಿದ ಚಿರತೆಗಳನ್ನು ಹಿಡಿಯುವಂತೆ ಹಂಚಿಹಳ್ಳಿ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ರೈತರು ತಮ್ಮ ಜಮೀನುಗಳ ಕಡೆ ಓಡಾಡಲು ಭಯದ ವಾತವರಣ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಹಂಚಿಹಳ್ಳಿ ಗ್ರಾಮಕ್ಕೆ ಅರಣ್ಯ ಇಲಾಖೆಗಳ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296