ಮೈಸೂರು: ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತಪಟ್ಟವರು.
ಪ್ರಯಾಗ್ ರಾಜ್ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಉತ್ತರಪ್ರದೇಶದ ಮಿರ್ಜಾಪುರ ಬಳಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಯುವಕರು ಎರಡು ಕಾರುಗಳಲ್ಲಿ ಪ್ರಯಾಗ್ರಾಜ್ ಯಾತ್ರೆಗೆ ಹೋಗಿದ್ದರು. ಅಪಘಾತದದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4