ಶಿವಮೊಗ್ಗ: ಬೈಕ್ ಸ್ಕಿಡ್ ಆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಹರಕೆರೆ ಬಳಿಯ ಕಾನೆಹಳ್ಳ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನ ನಿಸಾರ್ (20) ಮತ್ತು ಯಶವಂತ್ (20) ಎಂದು ಗುರುತಿಸಲಾಗಿದೆ. ವೇಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳು ದಿಢೀರನೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ.
ಕೆಟಿಎಂ ಬೈಕ್ ನಲ್ಲಿ ವಿದ್ಯಾರ್ಥಿಗಳು ಸಂಚರಿಸುತ್ತಿದ್ದರು. ಬೈಕ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿಗಳು ಮರ ಹಾಗೂ ಕಲ್ಲುಗಳಿಗೆ ಅಪ್ಪಳಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


