ಬೆಂಗಳೂರು: ನಗರದ ಹೊರವಲಯದ ತಾತಗುಣಿ ಬಳಿಯ ಆಗರ ಕೆರೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾದ ಪೃಥ್ವಿರಾಜ್, ನವೀನ್ ಮೃತರು.
ಸ್ನೇಹಿತರ ಜತೆ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದ್ದು, ಒಟ್ಟು 11 ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ತೆರಳಿದ್ದಾಗ, ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ದಳ ಆಗಮಿಸಿ ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


