ತುಮಕೂರು: ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕೆಎಸ್ಆರ್ ಟಿಸಿ ಬಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿಯಾಗಿದ್ದಾರೆ. ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗ್ತಿದ್ದ ಚಂದ್ರಶೇಖರ್, ಈ ವೇಳೆ ಬಸ್ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ.
ಬಸ್ ನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದ ಚಂದ್ರಶೇಖರ್ ರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296