ಬೆಂಗಳೂರು: ರಸ್ತೆಬದಿಯಲ್ಲಿ ಸಾರ್ವಜನಿಕರು ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಚನ್ನಸಂದ್ರಲೇಔಟ್ ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು ಬಂಧಿತ ಆರೋಪಿ.
ಕೆಂಗೇರಿಯ ಕೋಟೆ ಬೀದಿಯ ಮಾರಮ್ಮ ದೇವಸ್ಥಾನದ ಬಳಿ ನಿಲುಗಡೆ ಮಾಡಿದ್ದ ಬೈಕ್ ಕಳ್ಳತನವಾಗಿದೆ ಎಂದು ನಾರಾಯಣ ಮೂರ್ತಿ ಎಂಬುವರು ದೂರು ನೀಡಿದ್ದರು. ತನಿಖೆ ಕೈಗೊಂಡಾಗ ಆರೋಪಿ ಸರಣಿ ಕಳ್ಳತನ ನಡೆಸಿರುವುದು ಗೊತ್ತಾಗಿದೆ.


