ಬೀದರ್: ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ನೂರಾ ಪೊಲೀಸರು 9 ಲಕ್ಷಕ್ಕೂ ಅಧಿಕ ಮೌಲ್ಯದ ದ್ವಿಚಕ್ರ ವಾಹನ ಸಹಿತ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಭಾಲ್ಕಿ ಉಪ ವಿಭಾಗದ ಶಿವಾನಂದ್ ಪವಾಡ ಶೆಟ್ಟಿ, ಡಿವೈಎಸ್ ಪಿ ಭಾಲ್ಕಿ, ಗುರುಪಾದ, ಸಿಪಿಐ ಭಾಲ್ಕಿ ಗ್ರಾಮೀಣ ವೃತ್ತರವರ ನೇತೃತ್ವದಲ್ಲಿ ವಿಶ್ವರಾಧ್ಯ, ವೀರಶೆಟ್ಟಿ ಪಾಟೀಲ್, ಪಿಎಸ್ ಐ ಧನ್ನೂರಾ ಪೊಲೀಸ್ ಠಾಣೆ ರವರನ್ನೊಳಗೊಂಡ ನೂರಿತ ಅಧಿಕಾರಿ ಸಿಬ್ಬಂದಿ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, 9,35,000 ರೂ. ಮೌಲ್ಯದ 16 ದ್ವಿಚಕ್ರವಾಹನ ಸಹಿತ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q