ಬೆಂಗಳೂರು: ಬೈಕ್ ಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ನಂದಿನಿ ಲೇಔಟ್ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 3 ಲಕ್ಷ ರೂ. ಮೌಲ್ಯದ 7 ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹಲವು ವರ್ಷಗಳಿಂದ ಬೈಕ್ ಗಳನ್ನು ಕದಿಯುತ್ತಿದ್ದ. ಬೇಗೂರು, ನೆಲಮಂಗಲ, ರಾಜಗೋಪಾಲ್ ನಗರಗಳಲ್ಲಿ ಕೃತ್ಯವೆಸಗಿದ್ದ. ಅಷ್ಟೇ ಅಲ್ಲದೆ ಜೈಲಿಗೆ ಹೋಗಿ ಬಂದು ಮತ್ತೆ ಕಳ್ಳತನ ಮುಂದುವರಿಸಿದ್ದ. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


