ಕೊರಟಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಅರಸಾಪುರ ಬಳಿ ನಡೆದಿದೆ.
ಅರಸಾಪುರದ ಶಕುಂತಲಮ್ಮ(39), ಗಂಗಮ್ಮ(36) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ದನ ಮೇಯಿಸಲೆಂದು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಕೃಷಿಹೊಂಡದ ಬಳಿಯಲ್ಲಿ ಮೃತರ ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿಗಳು ಪೊಲೀಸರ ತನಿಖೆಯ ನಂತರ ತಿಳಿದು ಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC