ತುಮಕೂರು: ಸೀಟ್ ಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದಿದ್ದು ಬಿಡಿಸಲು ಹೋದ ಕಂಡೆಕ್ಟರ್ ಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ಘಟನೆ ತುಮಕೂರು ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ ನಲ್ಲಿ ತುಮಕೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಕಾದಾಟ ಆರಂಭಿಸಿದ್ದಾರೆ. ಮಹಿಳೆಯರ ಜಗಳ ತಡೆಯಲು ಹೋದ ಕಂಡೆಕ್ಟರ್ ಗೆ ಚಪ್ಪಲಿಯಿಂದ ಥಳಿಸಿದ್ದಾಳೆ.
ಮಹಿಳೆ ಹಲ್ಲೆ ನಡೆಸಿದ್ದರಿಂದಾಗಿ ಕಂಡೆಕ್ಟರ್ ತುಮಕೂರು ಟೌನ್ ಪೊಲೀಸ್ ಠಾಣೆ ಎದುರು ಬಸ್ ನಿಲ್ಲಿಸಿ ದೂರು ನೀಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA