ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಬಳಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರ ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕರಾದ ಮುತ್ತಮ್ಮ(70), ಪುಟ್ಟಮ್ಮ(63) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಇಂದು ಮಧ್ಯಾಹ್ನ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಈ ಹಿನ್ನಲೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


