ನವದೆಹಲಿ: ಕೊರೊನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದಂತಾಗುತ್ತದೆ ಎಂದು ತಿಳಿದು ಬಂದಿದೆ.
ಪಡಿತರ ಚೀಟಿದಾರರಿಗೆ ನೀಡುವ ಪಡಿತರದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700