ಹಿರಿಯೂರು : ಭಾರತ ಸ್ವತಂತ್ರ್ಯ ಪಡೆದು 75 ವರ್ಷಗಳು ಕಳೆದಿದ್ದು, ಈ ಅಮೃತ ಮಹೋತ್ಸವದ ಸಂಭ್ರಮದ ಅಂಗವಾಗಿ ಶಿಕ್ಷಣ, ಆರೋಗ್ಯ, ಕೃಷಿ ಈ ಮೂರು ಕ್ಷೇತ್ರಗಳಿಗೆ ಆದ್ಯತೆ ನೀಡಬೇಕೆಂಬ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಐಮಂಗಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮೊದಲು ಹೋಬಳಿ ಮಟ್ಟದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲು ಸರ್ಕಾರ ಮುಂದಾಗಿದ್ದು, ಜೀವನದಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಮುಂದೂಡಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಐಮಂಗಲ, ಮರಡಿಹಳ್ಳಿ, ಬುರುಜಿನರೊಪ್ಪ, ಸೂರಗೊಂಡನಹಳ್ಳಿ, ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರು ಜಿಲ್ಲಾ ಆರೋಗ್ಯ ಅಧಿಕಾರಿ, ಡಾ.ರಂಗನಾಥ್, ಜಿಪಂ ಮಾಜಿ ಸದಸ್ಯರು ಹಿರಿಯೂರು ತಾಲ್ಲೂಕು ಆರೋಗ್ಯ ಅಧಿಕಾರಿ T.H.O. ಡಾ.ವೆಂಕಟೇಶ್,ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರುಗಳು ಅಧ್ಯಕ್ಷರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5