ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ 30 ದಿನಗಳ ಮೊಬೈಲ್ ಪೋನ್ ದುರಸ್ಥಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ಸಪ್ಟೆಂಬರ್ ತಿಂಗಳಿನಲ್ಲಿ ಯಚಿತ ತರಬೇತಿ ನೀಡಲಾಗಿದ್ದು, ಸಪ್ಟೆಂಬರ್ 05 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೊಂದಾಯಿಸಿ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದ್ದು, ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣ ಸಂಖ್ಯೆ 9482188780, 9483485489, 8197022501, 9742438790, 08284-295307, 220807 ಕ್ಕೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಪ್ರಸನ್ನಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy