ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಮದರ್ ಡ್ರೀಮ್ಸ್ ರೂರಲ್ ಮತ್ತು ಅರ್ಬನ್ ಎಜುಕೇಶನ್ ಡೆವಲಮೆಂಟ್ ಸೊಸೈಟಿ ವತಿಯಿಂದ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಸಂಜೆ ಪಾಠ ಶಾಲೆ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಐವರ್ನಾಡಿನ ದೇವಕಾನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇವರಕಾನದಲ್ಲಿ ಆಯೋಜಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಸಾರಕೇರೆ ಮಾತನಾಡಿ, ಸಂಸ್ಥೆಯ ಉದ್ದೇಶ ಮಕ್ಕಳ ಜೀವನವನ್ನು ರೂಪಿಸುವಲ್ಲಿ ಬಹಳ ಯಶಸ್ವಿಯಾಗಲಿ ಎಂದು ಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾರಾದ ಪ್ರಮೀಳಾ ಮಾತನಾಡಿ, ಈ ಸಂಸ್ಥೆಯ ಯೋಜನೆಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಮಹಾಂತೇಶ್ ಡಿ. ಮಾತನಾಡಿ ಎಪಿಜೆ ಅಬ್ದುಲ್ ಕಲಾಂ, ಕುವೆಂಪು, ಸ್ವಾಮಿ ವಿವೇಕಾನಂದರ ರೀತಿ ಮಕ್ಕಳು ಬೆಳೆಯಲಿ ಎಂದು ಹಾರೈಸಿದರು.
ಶಾಲಾ ಮಕ್ಕಳಾದ ಸುಪ್ರಿತಾ ಮತ್ತು ತಂಡದವರು ಓದುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರಾದ ಸೋಮಪ್ರಸಾದ್ ರೈ ಗೂಡಂಬೆ ಮರ್ಕಂಜ, ಚಂದ್ರಶೇಖರ ಕೆ.ಪಲ್ಲತ್ತಡ್ಕ, ಮಧುಸೂದನ ಕಾಟಿಪಲ್ಲ, ರಘು ಕರಿಯಮೂಲೆ ಮತ್ತು ಸಹಶಿಕ್ಷಕರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


