nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026
    Facebook Twitter Instagram
    ಟ್ರೆಂಡಿಂಗ್
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪಘಾತದಲ್ಲಿ ಮಡಿದ ಸಂತ್ರಸ್ತೆ ಸಹೋದರಿಗೆ ಬೆಂಗಳೂರು ವಿವಿ ವತಿಯಿಂದ ಉಚಿತ ಶಿಕ್ಷಣ
    ರಾಜ್ಯ ಸುದ್ದಿ November 2, 2022

    ಅಪಘಾತದಲ್ಲಿ ಮಡಿದ ಸಂತ್ರಸ್ತೆ ಸಹೋದರಿಗೆ ಬೆಂಗಳೂರು ವಿವಿ ವತಿಯಿಂದ ಉಚಿತ ಶಿಕ್ಷಣ

    By adminNovember 2, 2022No Comments1 Min Read
    bangalore

    ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟ ಶಿಲ್ಪಶ್ರೀ ಎಂಬ ಹೆಸರಿನ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ವಿದ್ಯಾರ್ಥಿನಿಯ ತಂಗಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಶಿಕ್ಷಣವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.

    ಪ್ರಸ್ತುತ ಪದವಿ ಓದುತ್ತಿರುವ ಮೃತ ಶಿಲ್ಪಶ್ರೀ ಅವರ ಸಹೋದರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಉಚಿತವಾಗಿ ಸ್ನಾತಕೋತ್ತರ ಪದವಿ ಶಿಕ್ಷಣ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳಿಂದ ಒಂದು ದಿನದ ವೇತನವನ್ನು ಸಂತ್ರಸ್ತೆಯ ಕುಟುಂಬಸ್ಥರಿಗೆ ಹಣಕಾಸಿನ ನೆರವನ್ನು ನೀಡಲು ಸಿಂಡಿಕೇಟ್ ನಿರ್ಧರಿಸಲಾಗಿದೆ.

    ಈ ಸಂಬಂಧ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಲಾದ ಡಾ. ಜಯಕರ ಎಸ್.ಎಂ. ಅವರು, “ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನವನ್ನು ನೀಡುವುದು ಕಡ್ಡಾಯವಲ್ಲ. ನಾವು ಎಲ್ಲರಲ್ಲಿಯೂ ಮನವಿ ಮಾಡುತ್ತೇವೆ. ಯಾರಿಗೆ ಒಂದು ದಿನದ ವೇತನ ನೀಡುವುದು ಇಷ್ಟವೋ ಅವರು ನೀಡಬಹುದು. ಸಿಂಡಿಕೇಟ್‌ ನ ಎಲ್ಲಾ ಸದಸ್ಯರೂ ಸಹ ಈ ಉದ್ದೇಶಕ್ಕಾಗಿ ತಮ್ಮ ಸಭಾ ಭತ್ಯೆಯನ್ನು ದಾನ ನೀಡುತ್ತಿದ್ದಾರೆ,” ಎಂದು ತಿಳಿಸಿದರು.

    ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬದವರಿಗೆ ರೂ.1.5 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಸಿಂಡಿಕೇಟ್ ಸದಸ್ಯರು ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಷ್ಟು ದೊಡ್ಡ ಮೊತ್ತ ಪರಿಹಾರವಾಗಿ ನೀಡುವುದಕ್ಕೆ ವಿಶ್ವವಿದ್ಯಾಲಯದಲ್ಲಿ ಅವಕಾಶವಿಲ್ಲ ಎಂದು ಮನವೊಲಿಸಿದರು, ಎಂದು ಜಯಕರ ಅವರು ಮಾಹಿತಿ ನೀಡಿದ್ದಾರೆ.

    ಈ ನಡುವೆ, ವಿಶ್ವವಿದ್ಯಾಲಯವು ಶಿಲ್ಪಶ್ರೀ ಅವರ ಕುಟುಂಬಕ್ಕೆ ಪರಿಹಾರ ನೀಡಲು ವಿಶೇಷ ಅನುಮತಿಯನ್ನು ಕೋರಿ ಉನ್ನತ ಶಿಕ್ಷಣ ಇಲಾಖೆಗೆ ಬರೆಯಲಿದೆ.

    ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಓದುತ್ತಿದ್ದ ಶಿಲ್ಪಶ್ರೀ ಎಂಬ ವಿದ್ಯಾರ್ಥಿನಿ ಅಕ್ಟೋಬರ್ 13ರಂದು ಬಿಎಂಟಿಸಿ ಬಸ್ ಅಡಿ ಸಿಲುಕಿ ಮೃತಪಟ್ಟಿದ್ದರು. ಅದಾದ ನಂತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆಗಳು ನಡೆದವು. 13 ದಿನಗಳು ಆಸ್ಪತ್ರೆಯಲ್ಲಿದ್ದ ಶಿಲ್ಪಶ್ರೀ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    Comments are closed.

    Our Picks

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ಬೆಂಗಳೂರು: ಬೆಂಗಳೂರಿನಿಂದ ಗೋವಾಕ್ಕೆ ನೇರವಾಗಿ ಪ್ರಯಾಣಿಸುವವರಿಗೆ ಶೀಘ್ರದಲ್ಲೇ ಮತ್ತೊಂದು ಉತ್ತಮ ರೈಲು ಸಂಪರ್ಕ ಸಿಗುವ ನಿರೀಕ್ಷೆಯಿದೆ. ಯಶವಂತಪುರ–ಮಡಗಾಂ ನಡುವೆ ವಂದೇ…

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.