ಬೆಳಗಾವಿ : ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ(ಆರ್) ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಉಚಿತ ರೆಪ್ರೀಜಿರೇಶನ್ & ಎರ್ ಕಂಡಿಶನ್ ರಿಪೇರ್ ತರಬೇತಿ ನೀಡಲಾಗುವುದು.
18 ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ತರಬೇತಿ ಅವಶ್ಯಕತೆ ಹಾಗೂ ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜನವರಿ 31 ರ ಒಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟಿ(ಆರ್) ವಿಸ್ತರಣಾ ಕೇಂದ್ರ ಹಸನ್‍ಮಾಳ್, ದಾಂಡೇಲಿ-581325. ಅಥವಾ 08284-298547, 9449782425, 9731842849, 9731842849 ಈ ವಾಟ್ಸಪ್ ನಂಬರಿಗು ಅರ್ಜಿ ಸಲ್ಲಿಸಬಹುದು.
ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ತರಬೇತಿಯ ನಂತರ ಉದ್ಯೋಗ ನಿಯೋಜನೆಯ ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


