nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು ಉದಯಗಿರಿ ಗಲಾಟೆ‌ ಪ್ರಕರಣ: ಬಿಜೆಪಿಯವರಿಂದ ರಾಜಕೀಯ ಅಸ್ತ್ರವಾಗಿ ಉಪಯೋಗ: ಜಿ.ಪರಮೇಶ್ವರ್
    ತುಮಕೂರು February 24, 2025

    ಮೈಸೂರು ಉದಯಗಿರಿ ಗಲಾಟೆ‌ ಪ್ರಕರಣ: ಬಿಜೆಪಿಯವರಿಂದ ರಾಜಕೀಯ ಅಸ್ತ್ರವಾಗಿ ಉಪಯೋಗ: ಜಿ.ಪರಮೇಶ್ವರ್

    By adminFebruary 24, 2025No Comments2 Mins Read
    g parameshwar

    ತುಮಕೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್‌ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.


    Provided by
    Provided by

    ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು‌. ಪ್ರತಿಭಟನೆ‌ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು‌.

    ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮಗೆ ಅವಕಾಶ‌ ಮಾಡಿದರೆ ಒಳ್ಳೆಯದು. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಎಚ್ಚರಿಸಿದರು.

    ಮಂಗಳೂರು ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಡ್ರಗ್ಸ್ ಪೂರೈಕೆ ಮಾಡಿದವರು ಯಾರು? ಹೇಗೆ ಪೂರೈಕೆಯಾಗಿದೆ ಎಂಬುದನ್ನು ತನಿಖೆ‌ ನಡೆಸಲಿದ್ದಾರೆ. ಅಕ್ರಮ ಚಟುವಟಿಕೆಗಳು ಕಂಡುಬಂದಾಗಲೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಮಂಗಳೂರು ಹೊಸ ಜೈಲು‌ ಕಟ್ಟಡ ನಿರ್ಮಾಣ ನಡೆಯುತ್ತಿದೆ.‌ ಪೂರ್ಣಗೊಂಡ ಬಳಿಕ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

    ಪ್ರತಿ ಸಲ ಗಡಿಭಾಗದಲ್ಲಿ ಭಾಷಾ ಆಧಾರದ ಮೇಲೆ ಆಗುವ ಗಲಾಟೆ ವೇಳೆ ಬಹಳ ಎಚ್ಚರಿಕೆಯಿಂದ ಮಹಾರಾಷ್ಟ್ರದವರು ನಡೆದುಕೊಳ್ಳಬೇಕು. ಅದನ್ನು ಹೆಚ್ಚು ಬೆಳೆಯಲು ಬಿಡಬಾರದು. ನಮ್ಮಲ್ಲಿ ಅಂತಹ ಪ್ರಕರಣಗಳು ಆದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ.‌‌ ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಎಚ್ಚರಿಸಿದರು.

    ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅನೇಕ ಬಾರಿ ಕೆಲಸ‌ ಕಾರ್ಯಗಳ ನಿಮಿತ್ತ ದೆಹಲಿಗೆ ಹೋಗುತ್ತಾರೆ. ನಾನು ಒಂದು ವರ್ಷದ ನಂತರ ದೇಹಲಿಗೆ ಹೋಗಿದ್ದೆ. ನಾನು ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿರುವುದಾಗಿ ತಿಳಿಸಿದ್ದೆ. ದೆಹಲಿಗೆ ಹೋದಾಗ ಪಕ್ಷದ‌ ಕಚೇರಿಗೆ ಭೇಟಿ ನೀಡುವುದು ಸಹಜವಾದ ಪ್ರಕ್ರಿಯೆ. ಇದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಳ್ಳುವುದರಿಂದ ಪ್ರಯೋಜನವಿಲ್ಲ‌ ಎಂದು ಹೇಳಿದರು.

    ಸಚಿವ ಸ್ಥಾನಕ್ಕೆ ರಾಜೀನಾಮೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು ಕೊರಟಗೆರೆಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಅವರ ಅನಿಸಿಕೆ ಆಧಾರದ ಮೇಲೆ ಮಾತನಾಡಿದ್ದೇನೆ. ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇಲ್ಲ. ಇದರಿಂದ ಯಾವ ಸಂಚಲನ ಮಾಡಬೇಕಾದ ಅಗತ್ಯವಿಲ್ಲ. ನನ್ನ ರಾಜಕೀಯದ ವಿಚಾರ ಕೊರಟಗೆರೆ ಜನತೆಗೆ ಬಿಟ್ಟಿರುವುದು. ಕೊರಟಗೆರೆ ಜನ ನನ್ನನ್ನು ಆರಿಸಿದ್ದಾರೆ. ಅವರ ಏನು ಆಪೇಕ್ಷೆ ಪಡುತ್ತಾರೆ, ಅದ‌ನ್ನು ಮಾತಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

    ಸಿಎಂ ಆಗಲಿ ಎಂದು ಆಪೇಕ್ಷೆಪಡುತ್ತಾರೆಯೇ ಎಂದ ಮಾಧ್ಯಮದವರ ಪ್ರಶ್ನೆಗೆ, ನಾನು ಅದ್ಯಾವುದರ ಬಗ್ಗೆಯೂ ನಾನು ಮಾತನಾಡುವುದಿಲ್ಲ.  ಮುಖ್ಯಮಂತ್ರಿಗಳ ವಿಚಾರ, ಕೆಪಿಸಿಸಿ ಅಧ್ಯಕ್ಷರ ವಿಚಾರದಲ್ಲಿ ಯಾವುದನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ನಮ್ಮ ಅನಿಸಿಕೆಗಳನ್ನು ಹೈಕಮಾಂಡ್ ಮುಂದೆ ಹೇಳುವಂತಹದು ನಮ್ಮ ಪಕ್ಷದಲ್ಲಿನ ಪ್ರಕ್ರಿಯೆ.‌ ಇದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮಾಡುತ್ತಾರೆ. ನಾನು ಸೇರಿದಂತೆ‌ ಎಲ್ಲರು ಮಾಡುತ್ತೇವೆ‌ ಎಂದು ಹೇಳಿದರು‌.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ನಗರದ ಹೊರವಲಯದಲ್ಲಿರುವ ಬೆಳಗುಂಬ ರಸ್ತೆಯ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನಿಲಯವು ಉದ್ಘಾಟನೆಗೆ…

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.