ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ನೀಟ್ ಜೆಇಇ, ಸಿಇಟಿ ಪರೀಕ್ಷೆಗಳ ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ವೇಳೆ ವಿದ್ಯಾರ್ಥಿಯೊಬ್ಬ ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದು ಕೂಗಿದ ಘಟನೆ ನಡೆದಿದ್ದು, ಇದರಿಂದಾಗಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಎಲ್ಲರ ಸಮ್ಮುಖದಲ್ಲೇ ಮುಜುಗರಕ್ಕೀಡಾದರು.
ಆರಂಭದಲ್ಲಿ ಈ ಹೇಳಿಕೆಯನ್ನು ಅಷ್ಟೊಂದು ಗಂಭೀರವಾಗಿ ಮಧುಬಂಗಾರಪ್ಪ ಪರಿಗಣಿಸಿರಲಿಲ್ಲ. ಅವರು ನಗುತ್ತಲೇ, ಯಾರೋ ಅದು? ನಾನೇನು ಉರ್ದುವಿನಲ್ಲಿ ಮಾತಾಡಿದ್ನಾ? ಎಂದು ಮರು ಪ್ರಶ್ನೆ ಹಾಕಿದರು. ಆದರೆ ಅವಮಾನಿಸಲು ಈ ರೀತಿಯಾಗಿ ವಿದ್ಯಾರ್ಥಿ ಕೂಗಿದ್ದಾನೆ ಎನ್ನುವುದು ಅರಿವಾಗುತ್ತಿದ್ದಂತೆಯೇ ಆ ರೀತಿ ಕೂಗಿದವನ ವಿರುದ್ಧ ಆಕ್ಷನ್ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸರಿಯಾಗಿ ಕನ್ನಡ ಬರೋದಿಲ್ಲ ಎನ್ನುವ ಆರೋಪವಿದೆ. ಬಿಜೆಪಿ ನಾಯಕರು ಕೂಡ ಬಗ್ಗೆ ಹಲವು ಬಾರಿ ಆರೋಪ ಮಾಡಿ, ರಾಜೀನಾಮೆಗೆ ಒತ್ತಾಯಿಸಿದ್ದರು. ಆದರೆ ಈ ವಿಚಾರ ತಣ್ಣಗಾಗಿತ್ತು. ಇದೀಗ ವಿದ್ಯಾರ್ಥಿಯೊಬ್ಬ ಮತ್ತೆ ವಿದ್ಯಾಮಂತ್ರಿಗೆ ಕನ್ನಡ ಬರೋಲ್ಲ ಎಂದಿರುವುದು ಶಿಕ್ಷಣ ಸಚಿವರಿಗೆ ಮತ್ತೊಮ್ಮೆ ಇರಿಸುಮುರುಸು ಉಂಟಾಗುವಂತಾಗಿದೆ.
ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ರಾಜಕೀಯ ದಾಳಕ್ಕೆ ಬಳಕೆಯಾಗಿರುವುದು ದುರಂತ ಎನ್ನುವ ಮಾತುಗಳು ಕೇಳಿ ಬಂದಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q