ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಹಾಕೆ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಉಡುಪಿ ಎಸ್ಪಿಯಾಗಿದ್ದ ಎನ್. ವಿಷ್ಣುವರ್ಧನ್ ಕಡತ ಹಾಗೂ ಲಾಠಿ ಹಸ್ತಾಂತರಿಸುವ ಮೂಲಕ ಅಧಿಕಾರ ಸ್ವೀಕರಿಸಿದರು.
2015 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು 2011 ರಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಮೂಲತಃ ಮಹಾರಾಷ್ಟ್ರ ದ ನಾಸಿಕ್ ಜಿಲ್ಲೆಯವರು. ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಮಗಳೂರಿನ ಎಸ್ಪಿಯಾಗಿದ್ದ ಅಕ್ಷಯ್ ಈ ಹಿಂದೆ ಗುಲ್ಬರ್ಗಾ ದಲ್ಲಿ ಎಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳ ಪ್ರೊಬೇಷನರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಉಡುಪಿ ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ. ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಸಾಂಸ್ಕೃತಿಕವಾಗಿ ಹೆಸರುಗಳಿಸಿದೆ ಎಂದರು.
ಉಡುಪಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು, ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಮೊದಲ ಆದ್ಯತೆ ಆಗಿದೆ ಎಂದರು. ಉಡುಪಿ ಜಿಲ್ಲೆಗೆ 25 ವರ್ಷ ತುಂಬುತ್ತಿರುವ ಈ ಕಾಲಘಟ್ಟದಲ್ಲಿ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ನನಗೆ ಕೆಲಸ ಮಾಡುವುದಕ್ಕೆ ಸಂತೋಷ ಆಗುತ್ತದೆ ಎಂದರು.ಎನ್. ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ಸರಕಾರ ವರ್ಗಾವಣೆಗೊಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy