ತಿಪಟೂರು: ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಡಾ.ವೈ.ಎಸ್ ಪಾಟೀಲ್ ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮಾತನಾಡಿ, ಸರ್ಕಾರಿ ಕೆಲಸಕ್ಕಿಂತ ಸ್ವಯಂ ಉದ್ಯೋಗ ಉತ್ತಮ. ಜ್ಞಾನಕ್ಕಾಗಿ ನಾವು ಓದಬೇಕು, ಸರ್ಕಾರಿ ಕೆಲಸ ಸಿಗುತ್ತದೆಂದು ಓದಿ ನಿರಾಶರಾಗದೇ ಸ್ವಂತ ಉದ್ಯಮ, ಕೃಷಿಯಲ್ಲಿ ತೊಡಗಿಸಿಕೊಂಡು ಸಮೃದ್ಧಿಹೊಂದಿ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಕರೆನೀಡಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳು ಅಭಿನಯ ಗೀತೆ ಹಾಡಿದ್ದು, ಎಲ್ಲರ ಕಣ್ಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ತಾಲ್ಲೂಕು ಉಪ ವಿಭಾಗಾಧಿಕಾರಿ ಕಲ್ಪಶ್ರೀ ತಹಶೀಲ್ದಾರ್ ಚಂದ್ರಶೇಖರ್ ನಗರಸಭೆ ಪೌರಾಯುಕ್ತ ಉಮಾಕಾಂತ್ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ದಿನೇಶ್ ಮತ್ತಿತರರು ಭಾಗಿಯಾಗಿದ್ದರು .
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy