ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಯುಜಿ ವೈದ್ಯಕೀಯ (Medical) ಮತ್ತು ದಂತವೈದ್ಯಕೀಯ (Dental) ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ಆನ್ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು 2026ರ ಅಕ್ಟೋಬರ್ 22ರಂದು ಪ್ರಕಟಿಸಿದೆ.
ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಕೆಳಗಿನ ವೇಳಾಪಟ್ಟಿಯಂತೆ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರ ಸೂಚಿಸಿದೆ:
ಶುಲ್ಕ ಪಾವತಿ (Payment of fees): 2026ರ ಅಕ್ಟೋಬರ್ 22 ರಿಂದ ಅಕ್ಟೋಬರ್ 24ರವರೆಗೆ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ (ವೈದ್ಯಕೀಯ ಕೋರ್ಸ್ ಶುಲ್ಕ ಠೇವಣಿ ಕಡಿತಗೊಳಿಸಿ).
ಸೀಟ್ ಕನ್ಫರ್ಮೇಶನ್ ಸ್ಲಿಪ್ ಡೌನ್ಲೋಡ್: 2026ರ ಅಕ್ಟೋಬರ್ 24ರಂದು ಸಂಜೆ 4:00 ಗಂಟೆಯೊಳಗೆ ಡೌನ್ಲೋಡ್ ಮಾಡಿಕೊಳ್ಳಬೇಕು.
ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆಯ ದಿನಾಂಕ: ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲೆಗಳು, ಎರಡು ಜೆರಾಕ್ಸ್ ಪ್ರತಿಗಳು ಹಾಗೂ ಒಟಿಪಿ ಸ್ವೀಕರಿಸಲು ಮೊಬೈಲ್ನೊಂದಿಗೆ 2026ರ ಅಕ್ಟೋಬರ್ 25ರ ಸಂಜೆ 6:00 ಗಂಟೆಯೊಳಗೆ ನಿಗದಿತ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು.
ಪ್ರವೇಶ ಪಡೆಯಲು ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಆದ್ದರಿಂದ ಸೀಟು ಪಡೆದ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯ ಪ್ರಕಾರವೇ ಕಾಲೇಜುಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯುವಂತೆ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ (kea.kar.nic.in) ಸಂಪರ್ಕಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
