ಹಿರಿಯೂರು: ಏಪ್ರಿಲ್ 2, 3 ರಂದು ಕರ್ನಾಟಕದಾದ್ಯಂತ ಕನ್ನಡಿಗರ ಚೈತ್ರ ಮಾಸದ ಯುಗಾದಿ ಹಬ್ಬವನ್ನು ಆಚರಿಸಲ್ಪಡುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಾಲೂಕು ದಂಡಾಧಿಕಾರಿಗಳ ನೇತೃತ್ವದಲ್ಲಿಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರಾದ ಡಿ . ಉಮೇಶ್ ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ಆಗದಂತೆ ಸಾರ್ವಜನಿಕರು ಸಹಕರಿಸಬೇಕು. ಪೊಲೀಸ್ ಇಲಾಖೆ ಹಾಗೂ ತಾಲೂಕು ದಂಡಾಧಿಕಾರಿಗಳ ಸಹಕಾರದೊಂದಿಗೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಸಾರ್ವಜನಿಕರಿಗೆ ಈ ಸಂಬಂಧ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೈಗೊಳ್ಳಲು ಕ್ರಮವಹಿಸಲಾಗುತ್ತದೆ. ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಲು ಸಮನ್ವಯತೆ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರು ನ್ಯೂಸ್ ನ್ನು ನಾನು ವೀಕ್ಷಿಸುತ್ತಿದ್ದೇನೆ. ಉತ್ತಮವಾದ ವಿಚಾರಗಳನ್ನು ಕ್ರೂಢೀಕರಿಸಿ, ಪ್ರಚಾರ ಮಾಡುತ್ತಿದ್ದಾರೆ. ಸಾರ್ವಜನಿಕರು ಕೂಡ ಮಾಧ್ಯಮಕ್ಕೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮಾಧ್ಯಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಡಿ .ಉಮೇಶ್, ಸಾರ್ವಜನಿಕರಿಗೆ ಇದೇ ವೇಳೆ ಮುಂಚಿತವಾಗಿ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB