ಮನೆಮುಂದೆ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದಂತೆ ಕಾಣೆಯಾಗಿದ್ದ 3 ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ. ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಿನಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೂವರು ಮಕ್ಕಳು ವಿಜಯಪುರ ನಗರದ ಚಾಬಕಸಾಬ್ ದರ್ಗಾ ಬಳಿಯ ಮನೆಯಿಂದ ಕಾಣೆಯಾಗಿದ್ದರು. ಮೂವರು ಮಕ್ಕಳು ಬೇಸಿಗೆ ರಜೆಗೆಂದು ಮಾವನ ಮನೆಗೆ ಬಂದಿದ್ದರು. ಇದೀಗ ದುರಂತದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಗದಗ ಮೂಲದ ಅನುಷ್ಕಾ ಅನಿಲ್ ದಹಿಂಡೆ (9) ವಿಜಯ್ ಅನಿಲ್ ದಹಿಂಡೆ ( 7) ಹಾಗೂ ವಿಜಯಪುರದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಮಕ್ಕಳು ಬಹಳ ಸಮಯವಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಸಾಯಂಕಾಲ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲು ಮಾಡಿದ್ದರು. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು.
ಆದರೆ ನೆನ್ನೆ ಮದ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿನಿಂದ ಮಕ್ಕಳ ಸಾವನ್ನಪ್ಪಿದ್ದಾರೆಂದು ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳ ಶವಗಳನ್ನ ಕೊಂಡೊಯ್ಯಲು ಬಿಡದೆ ಗಲಾಟೆ ಮಾಡಿ ಪ್ರತಿಭಟಿಸಿದ ಪೋಷಕರು, ಚರಂಡಿ ನೀರು ಸಂಸ್ಕರಣಾ ಘಟಕಕ್ಕೆ ಸೆಕ್ಯೂರಿಟಿ ಇಲ್ಲದೆ ಇರೋದಕ್ಕೆ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿ ಕಣ್ಣೀರು ಹಾಕಿದರು. ಮಕ್ಕಳ ಸಾವಿಗೆ ನ್ಯಾಯ ನೀಡುವಂತೆ ಪ್ರತಿಭಟನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA