ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಎಂದು ಹೇಳಲಾಗಿದೆ.
ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ತಾಲಿಬ್ ಹುಸೇನ್ (38) ನನ್ನು ಬಂಧಿಸಿದ್ದಾರೆ. ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಈತ ಓಡಾಡುತ್ತಿದ್ದನಂತೆ. ಉಗ್ರ ತಾಲಿಬ್, ಬಿಎನ್ಎಲ್ ಏರ್ ಸರ್ವಿಸ್ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.
ಮೂಲತಃ ಜಮ್ಮು ಕಾಶ್ಮೀರದವನೇ ಆದ ತಾಲೀಬ್ ಹುಸೇನ್, ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ. ಜಮ್ಮು ಮತ್ತು ಕಾಶ್ಮೀರ್ ಪೊಲೀಸರು ಹಾಗೂ 17 ನೇ ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತ ಪೊಲೀಸರ ಹಿಟ್ ಲಿಸ್ಟ್‌ನಲ್ಲಿದ್ದ ಎಂದು ಮಾಹಿತಿ ದೊರೆತಿದೆ.
ಈತ ಬೆಂಗಳೂರಿನಲ್ಲಿ ಬಿಎನ್ಎಲ್ ಏರ್ ಸರ್ವಿಸ್ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡಿಕೊಂಡಿದ್ದ. ನಗರದಲ್ಲಿ ಪತ್ನಿ ಮತ್ತು 3 ಜನ ಮಕ್ಕಳ ಜೊತೆಗೆ ವಾಸವಿದ್ದ. ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷ ಈ ತನಿಗೆ ಆಶ್ರಯ ನೀಡಿದ್ದರಂತೆ. ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಸದ್ಯ ತಾಲಿಬ್ನನ್ನು ಬಂಧಿಸಿರುವ ಪೊಲೀಸರು, ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5