ರಜೌರಿ: ನಂತರ ಶಂಕಿತ ಉಗ್ರರ ಗುಂಡಿನ ದಾಳಿಯ ಪರಿಣಾಮ ಮೂವರು ನಾಗರಿಕರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಇಲ್ಲಿನ ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಂಕಿತ ಉಗ್ರರು ಗ್ರಾಮಸ್ಥರ ಮನೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ಮನೆಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ರಜೌರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರೆದೊಯ್ಯುಲಾಗಿದೆ. ಕಳೆದ ಎರಡು ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಡಿಸೆಂಬರ್ 16 ರಂದು ಸೇನಾ ಶಿಬಿರ ಹೊರಗಡೆ ನಡೆದ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


