ಇಂದೋರ್: ಇಂದು ಮುಂಜಾನೆ 5.50ರ ಸುಮಾರಿಗೆ ದೇಗುಲದ ಗರ್ಭಗುಡಿಯಲ್ಲಿ ಬೆಂಕಿ ಅವಘಢ ಸಂಭವಿಸಿ, ಅರ್ಚಕರು ಹಾಗೂ ಸಹಾಯಕರು ಸೇರಿ ಒಟ್ಟು 14 ಮಂದಿ ಗಾಯಗೊಂಡಿದ್ದಾರೆ.
ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ನಡೆದ ಬೆಂಕಿ ಅವಘಡ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಉಜ್ಜಯಿನಿಯ ಮಹಾಕಾಳ ದೇಗುಲದಲ್ಲಿ ನಡೆದ ಘಟನೆಯು ನೋವುಂಟು ಮಾಡಿದೆ. ಅವಘಢದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆ ಆಶಿಸುವೆ. ರಾಜ್ಯ ಸರ್ಕಾರದ ಮೇಲುಸ್ತುವಾರಿಯಲ್ಲಿ ಸ್ಥಳೀಯಾಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವುಗಳನ್ನು ನೀಡುವ ಕಾರ್ಯದಲ್ಲಿ ನಿರತವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.
‘ಘಟನೆಯಲ್ಲಿ ಗಾಯಗೊಂಡ 14 ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಕರೆ ಮಾಡಿ ಗಾಯಗೊಂಡಿರುವವರ ವಿವರಗಳನ್ನು ಕೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಫೋನ್ ಕರೆ ಮಾಡಿ ವಿಚಾರಿಸಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.’
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296