ಲಂಡನ್: ಕನ್ಸರ್ವೇಟಿವ್ ಪಕ್ಷದ ನೇತೃತ್ವದ ಸರ್ಕಾರವು ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದ ಬೆನ್ನಲ್ಲೇ ಈಗ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರದಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇದೆ ವೇಳೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಜಾನ್ಸನ್, ನೂತನ ಪ್ರಧಾನಿ ನೇಮಕವಾಗುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ.
ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ನಧಿಮ್ ಜಹಾವಿ ಅವರು ದೇಶದ ಒಳಿತಿಗಾಗಿ ಪ್ರಧಾನಿಗೆ ರಾಜೀನಾಮೆ ನೀಡುವಂತೆ ಮನವಿ ಮಾಡಿದ ನಂತರ ಜಾನ್ಸನ್ ಅವರು ಪ್ರಧಾನಿ ಹುದ್ದೆಯಿಂದ ನಿರ್ಗಮಿಸಿದ್ದಾರೆ ಎಂದು ಮಾಧ್ಯಮಗಳು ವರೆದಿ ಮಾಡಿವೆ.
ಜಾನ್ಸನ್ ಅವರ ಸಂಪುಟದಲ್ಲಿ ಹಲವಾರು ಸಚಿವರು ರಾಜೀನಾಮೆ ನೀಡಿದ ನಂತರವು ಅವರು ಅಧಿಕಾರಕ್ಕೆ ಅಂಟಿಕೊಂಡಿದ್ದರು. ಬುಧುವಾರದಂದು ಸಂಸತ್ತಿನಲ್ಲಿ ಮಾತನಾಡುತ್ತಾ ಅವರು ಒಂದು ವೇಳೆ ಸರ್ಕಾರವನ್ನು ನಡೆಸಲು ಅಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.ಅದಕ್ಕೂ ಮೊದಲು ಅವರು ತಮಗೆ ಜನರ ಬೆಂಬಲವಿದೆ ಆದ್ದರಿಂದ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.
ಸುನಕ್ ಸೇರಿದಂತೆ ಕನಿಷ್ಠ 32 ಬ್ರಿಟಿಷ್ ಸಂಸದರು ರಾಜೀನಾಮೆ ನೀಡಿದ್ದರು, ಇದಾದ ನಂತರ ಅಲ್ಪಮತಕ್ಕೆ ಅವರ ಸರ್ಕಾರವು ಕುಸಿದಿತ್ತು, ಇದರಿಂದಾಗಿ ಬ್ರಿಟನ್ ನಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದರಿಂದಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು ಎಂದು ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz