ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ.
ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ಅವರಿಗೆ ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡ ರಾತ್ರಿ ಸಚಿವ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ. ರಾಮಯ್ಯ ಅಸ್ಪತ್ರೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಭೇಟಿ ನೀಡಿದ್ದಾರೆ.
ಕುಟುಂಬಸ್ಥರು, ಅಭಿಮಾನಿಗಳ ಕಣ್ಣೀರು: ಉಮೇಶ್ ಕತ್ತಿ ಸಾವಿನ ಸುದ್ದಿ ಕೇಳಿ ಬೆಂಬಲಿಗರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದತ್ತ ಬೆಂಬಲಿಗರು ಆಗಮಿಸಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಯನ್ನು ನಂಬಲಾಗದೆ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz