nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    • ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ
    ರಾಜ್ಯ ಸುದ್ದಿ February 7, 2025

    ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

    By adminFebruary 7, 2025No Comments2 Mins Read
    philemon yang

    ಬೆಂಗಳೂರು:  ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ  ಐದು ಗ್ಯಾರಂಟಿ ಯೋಜನೆಗಳ  ಅನುಷ್ಠಾನದ ಮೂಲಕ  ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ  ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ     ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.

    ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

    ಸುಸ್ಥಿರ ಅಭಿವೃದ್ಧಿ ಗುರಿಗಳ  (SDG) ಸಾಧನೆಯಲ್ಲಿ  ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ   ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

    ಗ್ಯಾರಂಟಿ  ಯೋಜನೆಗಳಲ್ಲಿ   ಮಹಿಳೆಯರ ಕೈಗೆ  ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ  ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು , ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು  ಪೋಷಕಾಂಶ ನೀಡಿಕೆ , ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ,ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು  ನೀಡಿದರು.

    ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು , ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು  ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು.ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು.

    ನವೀಕರಿಸಬಹುದಾದ ಇಂಧನ ಉತ್ಪಾದನೆ ರಾಜ್ಯಕ್ಕೆ ಅಗ್ರಸ್ಥಾನ:

    ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ. 40 ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ  ವಿಶ್ವಸಂಸ್ಥೆಯ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿದರು.

    ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ (AI), ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ವಿಶ್ವಸಂಸ್ಥೆಯ  ಮೆಚ್ಚಿದರು. ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ  ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು. ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ (SDG) ಡ್ಯಾಶ್‌ಬೋರ್ಡ್ ವೀಕ್ಷಿಸಿ  ಶ್ಲಾಘಿಸಿದರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತಿಪಟೂರು: ನಗರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜುಲೈ 16ರ ಗುರುವಾರ ಮಧ್ಯಾಹ್ನ 12 ಗಂಟೆಗೆ ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ…

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.