ಕೌಟುಂಬಿಕ ಜಗಳ ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ಆರೋಪಿಯಾದ ಪತಿ ವಿಕಾಸ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಪಾರ್ಕಿಂಗ್ ಗುತ್ತಿಗೆದಾರರಾದ ಕುಮಾರ್ ಅವರು ಅತಿಯಾದ ಮದ್ಯಪಾನದ ಅಮಲಿನಲ್ಲಿ ಮನೆಗೆ ಬಂದಿದ್ದ ಮತ್ತು ಪತ್ನಿ ಜತೆಗೆ ತೀವ್ರವಾಗಿ ಜಗಳವಾಡಿದ್ದಾನೆ. ಈ ಜಗಳವು ತಾರಕಕ್ಕೇರಿ ಆಕೆಯನ್ನು ಮೂರನೇ ಮಹಡಿಯಿಂದ ಎಸೆದಿದ್ದಾನೆ. ಆ ಬಳಿಕ ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ವೈದ್ಯರು ಆಕೆ ಸತ್ತಿರುವ ವಿಷಯ ತಿಳಿಸಿದ್ದಾರೆ.


