ನಾಗ್ಪುರ: ಪರಿಚಯಸ್ಥ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಜಾಮೀನು ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.
ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಸ್ವಾಮಿ ತನಗೆ ಪರಿಚಯವಿರುವ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಮಹಿಳೆಯ 14 ವರ್ಷದ ಮಗಳ ಮೇಲೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದಲ್ಲದೆ ಈ ವಿಚಾರ ಬಹಿರಂಗಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಫ್ ಐಆರ್ ದಾಖಲಾಗಿದೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಗೋಸ್ವಾಮಿಯನ್ನು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಬಂಧಿಸಿದ್ದಾರೆ.


