ಬೆಳಗಾವಿ: ಸೈಬರ್ ವಂಚಕರ ಕಿರುಕುಳ ತಾಳಲಾರದೇ ರೈಲ್ವೆ ಉದ್ಯೋಗಿ ಮತ್ತು ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿಯ ಖಾನಾಪುರದ ಬೀಡಿ ಗ್ರಾಮದಲ್ಲಿ ನಡೆದಿದೆ.
ಮಾ. 28ರಂದು ಈ ಘಟನೆ ಬೆಳಕಿಗೆ ಬಂದಿದೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಮೃತಪಟ್ಟವರು.
ಈ ದಂಪತಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕೆಲ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಿದ್ದರು. ಇದನ್ನು ಗಮನಿಸಿ ಸೈಬರ್ ವಂಚಕರು ದಂಪತಿಯನ್ನು ಟಾರ್ಗೆಟ್ ಮಾಡಿದ್ದಾರೆ. ದೆಹಲಿಯಿಂದ ವಿಡಿಯೊ ಕಾಲ್ ಮಾಡಿ ದಂಪತಿಗೆ ಬೆದರಿಕೆಯೊಡ್ಡಿದ್ದರು.
ದಂಪತಿಯಿಂದ 6 ಲಕ್ಷ ರೂ. ಪಡೆದರೂ ಕಿರುಕುಳ ನಿಲ್ಲಿಸಿರಲಿಲ್ಲ. ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇಪದೇ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್ನಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, ‘ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ನಿಮ್ಮ ವಿರುದ್ಧ ಸೈಬರ್ ಸೆಲ್ಗೆ ದೂರು ನೀಡಿದ್ದೇನೆ’ ಎಂದು ಹೇಳಿದ್ದರು’ ಎಂದು ಡಿಯಾಗೋ ಅವರು ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
‘ಬಳಿಕ ಸುಮಿತ ಬಿಸ್ರಾ ಹೆಸರಿನ ವ್ಯಕ್ತಿ ಕರೆ ಮಾಡಿ ‘ಅನಿಲ ಅವರ ದೂರಿನ ಮೇಲೆ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತೇನೆ’ ಎಂದು ಬೆದರಿಸಿದರು. ಹಣ ನೀಡದೇ ಇದ್ದರೆ ನಿಮ್ಮ ಸಂದೇಶ ಹಾಗೂ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೇಳಿದ್ದರು. ಹಣ ಪಡೆದರೂ ಕಿರುಕುಳ ನಿಲ್ಲಿಸಿಲ್ಲ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ದೇಹಗಳನ್ನು ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾನ ನೀಡಿ’ ಎಂದೂ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4