ಮೈಸೂರು: ಮನೆ ಯಜಮಾನನನ್ನು, ಕಳೆದುಕೊಂಡ ನೋವಲ್ಲಿ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೀತಾ (40), ಮಗಳು ಪೂರ್ಣಿಮ (15) ಎಂದು ಗುರುತಿಸಲಾಗಿದೆ.
ಹಲವು ದಿನಗಳ ಹಿಂದೆ ಗೀತಾ ಅವರ ಪತಿ ರಾಜನಾಯಕ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತಿಯ ಅಗಲಿಕೆಯಿಂದ ಪತ್ನಿ ಗೀತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತ ತಾಯಿ ಸಾವಿನ ಸುದ್ದಿ ಕೇಳಿ ಮಗಳು ಪೂರ್ಣಿಮಾ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸರಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296