ಹೆಚ್.ಡಿ. ಕೋಟೆ: ತಾಲ್ಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳಾದ ಟಿ. ರವಿಕುಮಾರ್ ಮತ್ತು ತಂಡದವರು ಹೆಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕ ನಂದಿ ಮತ್ತು ಕಂಚ ಮಳ್ಳಿ ,ಯರಹಳ್ಳಿ ಗ್ರಾಮದಲ್ಲಿ ಆಹಾರ ಪರವಾನಿಗೆ ಇಲ್ಲದೆ ಬೆಲ್ಲಗಳನ್ನು ತಯಾರಿಸುವ ಅಲೆ ಮನೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಆಹಾರ ಸುರಕ್ಷಿತ ಅಧಿಕಾರಿಗಳು ಬೆಲ್ಲವನ್ನು ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೋಟಿಸ್ ನೀಡಿದರು.
ಮಾಲೀಕರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಯಾವುದೇ ಬೇರೆ ಪದಾರ್ಥಗಳನ್ನು ಕಲಬೆರಕೆ ಮಾಡದೆ, ಶುದ್ದವಾಗಿ ಬೆಲ್ಲವನ್ನು ತಯಾರಿಸಿ ಅದರ ಮೇಲೆ ತಯಾರಿಸಿದ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಹಾಗೂ FSSA ಲೈಸನ್ಸ್ ನಂಬರ್ ಹಾಗೂ ಗುಣಮಟ್ಟದ ಚಿಹ್ನೆ ಯನ್ನೂ ಕಡ್ಡಾಯವಾಗಿ ನಮೂದಿಸಬೇಕು ಹಾಗೂ ಅವಧಿ ಮೀರಿರುವ ಪದಾರ್ಥಗಳನ್ನು ಹಾಗೂ ಕಳಪೆ ಬೆಲ್ಲವನ್ನು ಯಾವುದೇ ಕಾರಣಕ್ಕೂ ರಪ್ತು ಮಾಡಬಾರದು ಎಂದು ಸೂಚನೆ ನೀಡಿದರು.
ಹೆಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ ಎಲ್ಲಾ ಅಲೆ ಮನೆ ಮಾಲೀಕರು ಕಡ್ಡಾಯವಾಗಿ ಆಹಾರ ಪರವಾನಿಗೆ ಲೈಸೆನ್ಸ್ ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ರವಿರಾಜ್ ಪ್ರದೀಪ್ ಇನ್ನಿತರರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


