ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂಗೆ(65) ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ದಾವೂದ್ ನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಹರಡಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಆದರೆ, ಕರಾಚಿಯ ಆಸ್ಪತ್ರೆಯೊಂದರಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈತನಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ನಿಕಟ ಕುಟುಂಬ ಸದಸ್ಯರಿಗೆ ಬಿಟ್ಟು ಬೇರೆ ಯಾರಿಗೂ ಅವಕಾಶ ನೀಡದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


