ಬಳ್ಳಾರಿ: ‘ಬಳ್ಳಾರಿ ಡಿವೈಎಸ್ ಪಿ ಚಂದ್ರಕಾಂತ ನಂದ ರೆಡ್ಡಿ ಮತ್ತು ಬ್ರೂಸ್ ಪೇಟೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಎನ್ ಸಿಂಧೂರ್ ಖಚಿತ ಮಾಹಿತಿ ಆಧರಿಸಿ ನಗರದ ಕಂಬಳಿ ಬಜಾರ್ ನ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಹಣ, ಆಭರಣ ಸಿಕ್ಕವು’ ಎಂದು ಎಸ್ ಪಿ ಹೇಳಿದರು.
‘ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ ₹5.60 ಕೋಟಿ ಹಣ ಪತ್ತೆಯಾಗಿದ್ದು, ಜೊತೆಗೆ, ₹1.4 ಕೋಟಿ ಮೌಲ್ಯದ 3 ಕೆ.ಜಿ ಚಿನ್ನ, ₹42 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಮತ್ತು ಗಟ್ಟಿಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ ₹7.5 ಕೋಟಿ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
‘ಈಗ ಸಿಕ್ಕಿರುವ ಹಣ ಮತ್ತು ಆಭರಣ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿಟ್ಟಿದ್ದೋ, ಹವಾಲದಿಂದ ಬಂದದ್ದೋ ಅಥವಾ ನರೇಶ್ ಸೋನಿ ಅವರ ವ್ಯಾಪಾರ ವ್ಯವಹಾರಕ್ಕೆ ಸಂಬಂಧಿಸಿದ್ದೋ ಖಚಿತವಾಗಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಎಫ್ ಐಆರ್ ದಾಖಲು ಮಾಡಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ವಿಷಯವನ್ನು ನಾವು ಆದಾಯ ತೆರಿಗೆ ಇಲಾಖೆಯ ಗಮನಕ್ಕೂ ತರುತ್ತೇವೆ’ ಎಂದರು.
‘ಹಣದ ಮೂಲದ ಬಗ್ಗೆ ಆಭರಣದಂಗಡಿ ಮಾಲೀಕ ನರೇಶ್ ಸೋನಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296