ಕೊರಟಗೆರೆ : ಸ್ವಾತಂತ್ರ್ಯದ ನಂತರ ನಿರಂತರವಾಗಿ ಸುಮಾರು 35 ವರ್ಷ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಈ ಕ್ಷೇತ್ರದಲ್ಲಿ ಅನಿರೀಕ್ಷಿತ ಕಳೆದ ಚುನಾವಣೆಯಲ್ಲಿ ಸೋಲಾಗಿದೆ. ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಹಾಗೂ ವೀರಣ್ಣನವರ ಕಾಲದಿಂದಲೂ ಇದು ಜೆಡಿಎಸ್ ಭದ್ರಕೋಟೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.
ಪಟ್ಟಣದ ಸುವರ್ಣ ಮುಖಿ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಆಯೋಜಿಸಲಾದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈಗಲೂ ಕಾಲ ಮಿಂಚಿಲ್ಲ ಮುಂದಿನ ದಿನಗಳಲ್ಲಿ ನಾವು ಜೊತೆ ಜೊತೆಯಾಗಿ ಕೆಲಸ ಮಾಡಿದರೆ ಜೆಡಿಎಸ್ ಗೆಲುವು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕರ್ತರು ಮತ್ತು ಮುಖಂಡರೇ ಜೆಡಿಎಸ್ ಪಕ್ಷದ ಬಹುದೊಡ್ಡ ಶಕ್ತಿ. ಆಯ್ಕೆಯಾದ ಪದಾಧಿಕಾರಿಗಳು ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಮತ್ತು ಕೇಂದ್ರ ಸಚಿವ ಕುಮಾರಣ್ಣನವರ ಆಶಯದಂತೆ ಹಿಂದಿನಂತೆ ಮುಂದೆಯೂ ಪಕ್ಷದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಕೊರಟಗೆರೆ ವಿ.ಸ. ಕ್ಷೇತ್ರದ ನೂತನ ಅಧ್ಯಕ್ಷ ಕಾಮರಾಜು ಮಾತನಾಡಿ, ಇತರೆ ಪಕ್ಷದ ಕಾರ್ಯಕರ್ತರಿಗೆ ಹೋಲಿಸಿದರೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರಮಾಣಿಕರು. ಮಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ಸಜ್ಜಾಗಿದೆ. ನಾನು ಸಹ ಪಕ್ಷದ ಸಂಘಟನೆ ಬಲಗೊಳಿಸುವ ಮುಖೇನಾ ಮುಂದಿನ ತಾ.ಪಂ ಮತ್ತು ಜಿ.ಪಂ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಅಧ್ಯಾಯ ಸೃಷ್ಟಿಸೋಣ ಎಂದು ಹೇಳಿದರು.
ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ್ ಮಾತನಾಡಿ ಇಂದು ಎಂದೆಂದಿಗೂ ಕೊರಟಗೆರೆ ಜೆಡಿಎಸ್ ಭದ್ರಕೋಟೆ. ಕಳೆದ ಚುನಾವಣೆಯ ಅನಿರೀಕ್ಷಿತ ಸೋಲು ಟೀಕಿಸುವವರಿಗೆ ಆಹಾರವಾಗಿದೆ. ಮತ್ತೆಂದು ಇಂತಹ ಸನ್ನಿವೇಶಗಳು ಮರುಸೃಷ್ಠಿಸದ ರೀತಿಯಲ್ಲಿ ಕಾರ್ಯಕರ್ತರು, ಮುಖಂಡರು ಹೋಬಳಿವಾರುಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಬಾವುಟ ಹಾರುವಂತೆ ಶ್ರಮವಹಿಸಿ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ನೇಮಕಾತಿ ಆದೇಶ ಪ್ರತಿ ವಿತರಣೆ:
ಜೆಡಿಎಸ್ ಪಕ್ಷದ ವರಿಷ್ಠರ ಆದೇಶದಂತೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಕಾಮರಾಜು, ಕಾರ್ಯಾಧ್ಯಕ್ಷರಾಗಿ ಲಕ್ಷ್ಮೀಶ್, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಕೆ.ಆರ್, ಯುವ ಅಧ್ಯಕ್ಷ ವೆಂಕಟೇಶ್, ಕೊರಟಗೆರೆ ನಗರ ಅಧ್ಯಕ್ಷ ರಮೇಶ್ ಕೆ.ಜಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀನರಸಯ್ಯ, ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಕೆ.ಎನ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಮಲ್ಲಪ್ಪ, ಹಿಂದುಳಿದ ವರ್ಗಗಳ ಅಧ್ಯಕ್ಷ ರಂಗಯ್ಯ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹಯತ್ ಖಾನ್ ಸೇರಿ ಒಟ್ಟು 30 ಮಂದಿ ಪದಾಧಿಕಾರಿಗಳು ವಿವಿಧ ಘಟಕಗಳ ಸ್ಥಾನಕ್ಕೆ ಆಯ್ಕೆಯಾಗಿದ್ದು ಮಾಜಿ ಶಾಸಕ ಸುಧಾಕರ್ ಲಾಲ್ ಸಮಾರಂಭದಲ್ಲಿ ನೇಮಕಾತಿ ಆದೇಶ ಪ್ರತಿಯನ್ನು ವಿತರಿಸಿ ಶುಭಹಾರೈಸಿದರು.
ಈ ಸಮಾರಂಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಹಾಲು ಒಕ್ಕೂಟದ ನಿರ್ದೇಶಕ ಸಿದ್ದಗಂಗಯ್ಯ, ಕೊರಟಗೆರೆ ವಿ.ಸ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್, ಯುವ ಅಧ್ಯಕ್ಷ ವೆಂಕಟೇಶ್, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀನರಸಯ್ಯ, ಕೊರಟಗೆರೆ ನಗರಾಧ್ಯಕ್ಷ ರಮೇಶ್ ಕೆ.ಜಿ, ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಮಲ್ಲಪ್ಪ, ವಕ್ತಾರ ಮಂಜುನಾಥ್, ಹಿಂದುಳಿದ ವರ್ಗಗಳ ಅಧ್ಯಕ್ಷ ರಂಗಯ್ಯ, ಸಂಘಟನಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್, ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹಯತ್ ಖಾನ್, ಯುವ ಘಟಕ ಅಧ್ಯಕ್ಷ ಕೌಶಿಕ್, ಕಾರ್ಮಿಕ ಘಟಕ ಅಧ್ಯಕ್ಷ ಪಾಂಡು, ನಗರ ಅಲ್ಪಾಸಂಖ್ಯಾತರ ಘಟಕ ಅಧ್ಯಕ್ಷ ಫಾರುಕ್, ಸಂಚಾಲಕ ಎಲ್.ವಿ ಪ್ರಕಾಶ್ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4