ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಟಿ.ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ.
ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ನಿವೃತ್ತ ಬ್ಯಾಂಕ್ ನೌಕರರು ಎಂದು ತಿಳಿದು ಬಂದಿದೆ. ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಿಜಿಎಸ್ ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದರು. ಈ ವೇಳೆ ಅಪರಿಚಿತ ವಾಹನ ಅವರ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಚಾಮರಾಜಪೇಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪರಿಚಿತ ವಾಹನದ ಪತ್ತೆಗಾಗಿ ಬಲೆ ಬೀಸಿದ್ದಾರೆ. ಅಲ್ಲದೇ ಸುತ್ತಮುತ್ತಲಿನ ಸಿಸಿ ಟಿವಿ ಕ್ಯಾಮರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


