ದೇಶದಾದ್ಯಂತ ಏಕರೂಪ ಚಾಲನಾ ಪರವಾನಗಿ ವಾಹನಗಳ ನೋಂದಣಿ ಪ್ರಮಾಣಪತ್ರ ಇರಬೇಕು ಎಂಬ ಕೇಂದ್ರ ಸರ್ಕಾರದ ಆದೇಶ ಫೆಬ್ರವರಿಯಲ್ಲಿ ಜಾರಿಗೆ ಬರಲಿದೆ. ಇನ್ನು ಮುಂದೆ ಡಿಎಲ್, ಆರ್‌ಸಿಗಳಲ್ಲಿ ಕ್ಯೂಆರ್ ಕೋಡ್ ಕೂಡ ಇರಲಿದೆ.
ಒಂದು ದೇಶದಲ್ಲಿ ಒಂದೇ ಮಾದರಿಯ ಸ್ಮಾರ್ಟ್ ಕಾರ್ಡ್ ಇರಬೇಕು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2019ರಲ್ಲಿ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ಛತ್ತೀಸ್ಗಡ, ಹಿಮಾಚಲ ಪ್ರದೇಶ, ತಮಿಳುನಾಡು ಸಹಿತ ಕೆಲವು ರಾಜ್ಯಗಳು ಇದನ್ನು ಜಾರಿಗೆ ತಂದಿದ್ದವು.


