ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ 2 ಸಾವಿರ ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತಿರುವ ರಾಜ್ಯ ಸರಕಾರ, ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಉತ್ತಮ ಆಡಳಿತಕ್ಕೆ ರಾಜ್ಯ ಮಾದರಿಯಾಗಿತ್ತು. ಅದನ್ನು ನಾಶ ಮಾಡಲು ಇವರು ಹೊರಟಿದ್ದಾರೆ. ರೈತ ಮಹಿಳೆಯರು ಮತ್ತು ಬಡ ಮಹಿಳೆಯರೇ ಹೆಚ್ಚಾಗಿ ಮೈಕ್ರೋ ಫೈನಾನ್ಸ್ ಗಳಿಗೆ ಗುರಿಯಾಗುತ್ತಿದ್ದು ಇವರೆಲ್ಲರೂ ತಮ್ಮ ಮನೆ ಊರುಗಳನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ದೂರಿದ್ದಾರೆ.
ಮಂಡ್ಯ ಜಿಲ್ಲೆ ಒಂದರಲ್ಲಿಯೇ 60 ಮೈಕ್ರೋ ಫೈನಾನ್ಸ್ ಗಳಿವೆ. ಅದರಲ್ಲಿ 14-15 ಫೈನಾನ್ಸ್ ಗಳು ಪರವಾನಗಿ ಪಡೆದಿವೆ. ಉಳಿದವು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುತ್ತಾ ಜನರಿಗೆ ತೊಂದರೆ ಕೊಡುತ್ತಿವೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx