ತುಮಕೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿದರು.
ಕುಮಾರಸ್ವಾಮಿ ಅವರಿಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಾಥ್ ನೀಡಿದರು. ತುಮಕೂರು ಬಿಜೆಪಿ ಶಾಸಕ ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಜೊತೆಯಲ್ಲಿ ಇದ್ದರು.
ರಾಮನಗರ ಸೇರಿದಂತೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿದ್ದಗಂಗಾ ಮಠದ ಭಕ್ತಾದಿಗಳ ಸಂಖ್ಯೆ ಕೂಡ ಅಪಾರ ಪ್ರಮಾಣದಲ್ಲಿದ್ದಾರೆ. ಹೀಗಾಗಿ ಬಹುತೇಕ ಆ ಭಾಗದಲ್ಲಿ ಚುನಾವಣೆಗಳು ನಡೆದ ಸಂದರ್ಭದಲ್ಲಿ ಅಭ್ಯರ್ಥಿಗಳು ಹಾಗೂ ಮುಖಂಡರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಸ್ವಾಮೀಜಿಯವರ ಆಶೀರ್ವಾದ ಪಡೆಯುವುದು ಸರ್ವೇ ಸಾಮಾನ್ಯವಾಗಿರುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q