ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನುಡಿದಂತೆ ನಡೆದಿದ್ದು, ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ಅವರ ಪುತ್ರಿಗೆ ಕೆಲಸ ಕೊಡಿಸಿದ್ದಾರೆ.
ಕೃತಿಕಾ ಅವರಿಗೆ ಕೆಲಸ ಕೊಡಿಸುವುದಾಗಿ ಕುಮಾರಸ್ವಾಮಿ ಮಾತುಕೊಟ್ಟಿದ್ದರು. ಇದೀಗ ಕೊಟ್ಟ ಮಾತಿನಂತೆ ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ ಇಎಲ್ ನಲ್ಲಿ ಕೃತಿಕಾ ಗೆ ಉದ್ಯೋಗ ಕಲ್ಪಿಸಲಾಗಿದೆ. ದೂರವಾಣಿ ಮೂಲಕ ಕುಮಾರಸ್ವಾಮಿ ಉದ್ಯೋಗ ಖಾತರಿಪಡಿಸಿದ್ದಾರೆ.
ಮತ್ತೊರ್ವ ಪುತ್ರಿ ಪಲ್ಲವಿ ನಾಯಕ ಅವರಿಗೂ ಕಳೆದ ವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೌಕರಿ ನೀಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q